ಮಡಿಕೇರಿ, ಅ. 15: ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ 5 ರಿಂದ 16 ವರ್ಷದ ಮಕ್ಕಳಿಗಾಗಿ ನಗರದ ಬಾಲಕಿಯರ ಬಾಲಮಂದಿರ ಎಫ್.ಎಂ.ಸಿ. ಕಾಲೇಜು ಹತ್ತಿರ ಇಲ್ಲಿ ತಾ. 19 ರಂದು ಗಾಂಧಿ ಜಯಂತಿ ಅಂಗವಾಗಿ ಚಿತ್ರಕಲೆ-ಸ್ವಚ್ಛತೆ ಬಗ್ಗೆ ಹಾಗೂ ಗಾಂಧೀಜಿಯ ವಿಚಾರ ಧಾರೆಗಳ ಮಹತ್ವದ ಬಗ್ಗೆ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಇಲಾಖೆಯಿಂದ ಪ್ರಮಾಣ ಪತ್ರ ನೀಡಲಾಗುವದು. ಕಾರ್ಯಕ್ರಮಕ್ಕೆ 100 ಮಕ್ಕಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಮಕ್ಕಳು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಚೈನ್ ಗೇಟ್ ಹತ್ತಿರ ಮಡಿಕೇರಿ ಇಲ್ಲಿ ತಾ. 17 ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ. 9482194105, 9611587016 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.