ಸುಂಟಿಕೊಪ್ಪ, ಅ. 15: ಸರಕಾರವು ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹತ್ತು ಹಲವು ಸವಲತ್ತುಗಳನ್ನು ನೀಡುತ್ತಿದೆ. ಅದನ್ನು ಸದ್ಬಳಕೆಗೊಳಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ದೇಶ ಸೇವೆಗೆ ಸನ್ನದರಾಗುವಂತೆ ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ ಹೇಳಿದರು.
ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮಂಜಿಕೆರೆ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಸರಕಾರದಿಂದ ನೀಡಲಾಗಿದ್ದ ಸೈಕಲ್‍ಗಳನ್ನು ಜಿ.ಪಂ. ಸದಸ್ಯೆ ಕುಮುದ ಧರ್ಮಪ್ಪ ವಿತರಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಸರಕಾರ ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ಕೊಡುವ ದಿಸೆಯಲ್ಲಿ ಪಠ್ಯಪುಸ್ತಕದಿಂದ ಹಲವು ಅಕ್ಷರದಾಸೋಹ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶದ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ರಂಜಿನಿ, ಸದಸ್ಯರುಗಳಾದ ಅಂಬೆಕಲ್ ಚಂದ್ರಶೇಖರ, ತಾಲೂಕು ಪಂಚಾಯಿತಿ ಸದಸ್ಯೆ ಹೆಚ್.ಡಿ. ಮಣಿ, ಕಾಫಿ ಬೆಳೆಗಾರರಾದ ನೀಲಮ್ಮ ಪೆಮ್ಮಯ್ಯ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮಂಜೇಶ್, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.