ಕೂಡಿಗೆ, ಅ. 16: ಶಿರಂಗಾಲದ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2019-20ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್. ಜಯಣ್ಣ ಸಾಲುಕೊಪ್ಪಲು ಗ್ರಾಮದಲ್ಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ವಿಶೇಷ ಶಿಬಿರಗಳು ನಾಯಕತ್ವ ಗುಣಗಳನ್ನು, ಸಮಾನತೆಯನ್ನು ಬೆಳೆಸಿಕೊಳ್ಳಲು ತುಂಬಾ ಸಹಕಾರಿಯಾಗಿವೆ ಎಂದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಂಗಳೂರು ವಿಭಾಗದ ಎನ್‍ಎಸ್‍ಎಸ್ ವಿಭಾಗೀಯ ಅಧಿಕಾರಿಗಳಾದ ಸವಿತಾ ಯರ್ಮಾಳ್, ಇಂತಹ ಶಿಬಿರಗಳಲ್ಲಿ ಭಾಗವಹಿಸಬೇಕು ಇದರಿಂದ ತಮ್ಮ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗುತ್ತದೆ. ಗ್ರಾಮೀಣ ಭಾಗದ ಸೇವೆಯನ್ನು ಮಾಡುವ ಸದಾವಕಾಶ ಎಲ್ಲರಿಗೂ ಸಿಗುವದು ಕಷ್ಟ. ಉತ್ತಮವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ವಿಶೇಷ ಶಿಬಿರದಲ್ಲಿ ಇಂಗು ಗುಂಡಿಗಳ ನಿರ್ಮಾಣ, ದೇವಾಲಯದ ಆವರಣದ ಸ್ವಚ್ಛತೆ, ರಸ್ತೆ ನಿರ್ಮಾಣ ಕಾಲುವೆಗಳ ದುರಸ್ತಿ ಮೊದಲಾದ ಕೆಲಸಗಳನ್ನು ನಿರ್ವಹಿಸಲಾಗುವದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ನಿರ್ದೇಶಕ ಜಿ. ಕೆಂಚಪ್ಪ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎನ್.ಬಿ. ಮಹೇಶ್ ಎಸ್‍ಡಿಎಂಸಿ ಅಧ್ಯಕ್ಷ ಎಸ್.ಎಸ್. ಕೃಷ್ಣ, ವಿಎಸ್‍ಎಸ್‍ನ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಎಸ್. ರಮೇಶ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹೆಚ್.ಬಿ. ಹರೀಶ್, ದೇವತಾ ಸಮಿತಿ ಅಧ್ಯಕ್ಷ ಎಸ್.ಸಿ. ರುದ್ರಪ್ಪ, ನಿರ್ದೇಶಕ ಮೋಹನ್, ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಮೊದಲಾದವರಿದ್ದರು.

ಉಪನ್ಯಾಸಕ ಹೆಚ್.ಆರ್. ಶಿವಕುಮಾರ್, ಗಣೇಶ್, ಕೆ.ಎನ್. ಪಲ್ಲವಿ ಕಾರ್ಯಕ್ರಮವನ್ನು ನಿರ್ವಹಿಸಿದರು.