ಗೋಣಿಕೊಪ್ಪಲು, ಅ. 16: ಇತ್ತೀಚೆಗೆ ಕಾವೇರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲುವಿನಲ್ಲಿ ‘ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸ ಲಾಯಿತು. ಕಳೆದ 11 ವರ್ಷಗಳಿಂದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡವ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸುವ ಮುಖಾಂತರ ಶೈಕ್ಷಣಿಕ ಬೆಳವಣಿಗೆಗೆ ಈ ಸಂಸ್ಥೆ ಸಹಕಾರಿ ಯಾಗುತ್ತಿದೆ. ಈ ಸಂಸ್ಥೆಯ ಅಧ್ಯಕ್ಷ ಕಟ್ಟೇರ ಎ. ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದ್ಬಳಕೆ ಮಾಡಿಕೊಂಡು, ಗೋಣಿಕೊಪ್ಪಲು, ಅ. 16: ಇತ್ತೀಚೆಗೆ ಕಾವೇರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲುವಿನಲ್ಲಿ ‘ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸ ಲಾಯಿತು. ಕಳೆದ 11 ವರ್ಷಗಳಿಂದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡವ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸುವ ಮುಖಾಂತರ ಶೈಕ್ಷಣಿಕ ಬೆಳವಣಿಗೆಗೆ ಈ ಸಂಸ್ಥೆ ಸಹಕಾರಿ ಯಾಗುತ್ತಿದೆ. ಈ ಸಂಸ್ಥೆಯ ಅಧ್ಯಕ್ಷ ಕಟ್ಟೇರ ಎ. ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದ್ಬಳಕೆ ಮಾಡಿಕೊಂಡು, ಪಡೆದುಕೊಂಡ ಕೆಲವು ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿ, ವಿದ್ಯಾರ್ಥಿ ವೇತನವು ಶಿಕ್ಷಣವನ್ನು ಮುಂದುವರಿಸಲು ಸಹಕಾರಿಯಾಗಿದ್ದು, ತಾವು ಕೂಡ ಒಳ್ಳೆಯ ಹುದ್ದೆಗೆ ಸೇರಿ ಮುಂದಿನ ಪೀಳಿಗೆಯ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವದಾಗಿ ಭರವಸೆ ನೀಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ರಾದ ಪ್ರೊ. ಕುಸುಮಾದರ್ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ವಂದಿಸಿದರು. ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ 97 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆದುಕೊಂಡರು.