ಮಡಿಕೇರಿ, ಅ.16: ಲೋಕಾಯುಕ್ತ ರವರು ಜಿಲ್ಲೆಯ ತಾಲೂಕು ಕೇಂದ್ರ ಗಳಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಎಲ್ಲಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿ ಸಾರ್ವಜನಿಕ ದೂರುಗಳನ್ನು ಬಗೆಹರಿಸಲು ತಾ. 22 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ, ತಾ. 23 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಯಲ್ಲಿ ಹಾಗೂ ತಾ. 24 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಸಭೆ ನಡೆಸಲಿದ್ದಾರೆ ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎನ್.ಎಂ.ಪೂಣಚ್ಚ ಅವರು ತಿಳಿಸಿದ್ದಾರೆ.