ಸಿದ್ದಾಪುರ, ಅ. 16 : ನೆಲ್ಲಿಹುದಿಕೇರಿ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲನೆ ನಡೆಸಿದರು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ತೀವ್ರವಾಗಿದ್ದು ಈ ನಿಟ್ಟಿನಲ್ಲಿ ಕಸ ವಿಲೇವಾರಿಗೆ ಸೂಕ್ತ ಜಾಗ ಒದಗಿಸಿಕೊಡುವಂತೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇತ್ತೀಚೆಗೆ ಸಭೆ ನಡೆಸಿತ್ತು .
ಈ ಹಿನ್ನೆಲೆಯಲ್ಲಿ ಬುಧವಾರ ದಂದು ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಕಸ ವಿಲೇವಾರಿ ವೈಜ್ಞಾನಿಕವಾಗಿ ಮಾಡುವ ನಿಟ್ಟಿನಲ್ಲಿ ಜಾಗವನ್ನು ಸದ್ಯದಲ್ಲಿ ಗುರುತಿಸಿ ಸಮಸ್ಯೆಯನ್ನು ಬಗೆಹರಿಸಲಾಗುವದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು.