ಕೂಡಿಗೆ, ಅ. 16: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮೊದಲಿಗೆ ಕಸ ವಿಲೇವಾರಿ ಮತ್ತು ಶುಚಿತ್ವದ ಬಗ್ಗೆ ಆಯಾ ವಾರ್ಡಿನ ಸದಸ್ಯರು ಚರ್ಚೆ ನಡೆಸಿದರು. ಕಳೆದ ಮಾಸಿಕ ಸಭೆಯಲ್ಲಿ ಕೈಗೊಂಡ ಕಾಮಗಾರಿ ಯೋಜನೆಗಳ ಬಗ್ಗೆ ಮತ್ತು ಕ್ರಿಯಾ ಯೋಜನೆಯ ಅನುಷ್ಠಾನ ವಿಷಯಕ್ಕೆ ಸಂಬಂಧಿಸಿದ ಅನೇಕ ಚರ್ಚೆಗಳು ನಡೆದವು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಪಾಡಲು ಆದÀ್ಯತೆ ನೀಡುವ ಬಗ್ಗೆ ಚರ್ಚೆ ನಡೆದವು.
ಈ ಸಂದರ್ಭ ಅಧ್ಯಕ್ಷೆ ಭವ್ಯ ಮಾತನಾಡಿ, ಸಭೆಯಲ್ಲಿ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸ ಲಾಗಿದೆ. ಎಲ್ಲಾ ಸದಸ್ಯರ ವಾರ್ಡುಗಳ ಪ್ರಗತಿಗೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದÀ್ಯತೆ ನೀಡಲು ಕ್ರಮಕೈಗೊಳ್ಳಲಾಗುವದು ಎಂದು ತಿಳಿಸಿದರು. ಮುಂದಿನ ಸಾಲಿನಲ್ಲಿ ವಸತಿ ರಹಿತ ಯೋಜನೆಯಡಿಯಲ್ಲಿ ವಸತಿ ರಹಿತರಿಗೆ ನಿವೇಶನ ಕಲ್ಪಿಸಿಕೊಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವದು ಎಂದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ರಾಜಶೇಖರ್ ಮಾತನಾಡಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಯಮಾ ನುಸಾರ ಕಾರ್ಯ ನಿರ್ವಹಿಸಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಇನ್ನು ಹೆಚ್ಚು ಕಾಮಗಾರಿಗಳನ್ನು ಕೈ ಗೊಳ್ಳಲು ಅವಕಾಶಗಳಿದ್ದು, ಗ್ರಾಮಸ್ಥರು ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಉದ್ಯೋಗ ಖಾತರಿ ಯೋಜನೆಗೆ ಸಹಕರಿಸಬೇಕು ಎಂದರು. ಈ ಸಂದರ್ಭ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಜರಿದ್ದರು.