ಸೋಮವಾರಪೇಟೆ,ಅ.18: ಸಮೀಪದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. 25ರಂದು ಪೂರ್ವಾಹ್ನ 10.30ಕ್ಕೆ ಗ್ರಾ.ಪಂ. ಸಭಾಂಗಣದಲ್ಲಿ, ಅಧ್ಯಕ್ಷೆ ಹೆಚ್.ಆರ್. ಪವಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನೋಡಲ್ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಜಹಾನ್ ತಾಜ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಬಿ.ಎ. ಧರ್ಮಪ್ಪ ಸೇರಿದಂತೆ ಇತರ ಇಲಾಖಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.