ಸೋಮವಾರಪೇಟೆ, ಅ. 18: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ದೊಡ್ಡಮಳ್ತೆ ಗ್ರಾ.ಪಂ. ವ್ಯಾಪ್ತಿಯ ವಳಗುಂದ ಅಂಗನವಾಡಿಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ನಡೆಯಿತು.

ಸೋಮವಾರಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಸುಂದರ್ ಸುವರ್ಣ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ಒದಗಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಮಕ್ಕಳ ಹಕ್ಕುಗಳ ರಕ್ಷಣೆ, ದೊಡ್ಡಮಳ್ತೆ ಗ್ರಾ.ಪಂ. ಅಧ್ಯಕ್ಷ ದಿವಾಕರ್ ಅವರು, ಬಾಲ್ಯವಿವಾಹ ನಿಷೇಧ ಕಾಯ್ದೆ, ಚೈಲ್ಡ್‍ಲೈನ್ ಸಂಸ್ಥೆಯ ನವೀನ್ ಮಕ್ಕಳ ಸಹಾಯವಾಣಿ ಕೇಂದ್ರ ಹಾಗೂ ಉಚಿತ ಕರೆಗಳ ಬಗ್ಗೆ ಮಾಹಿತಿ ಒದಗಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯೆ ಸೋಮಕ್ಕ, ಅಂಗನವಾಡಿ ಕಾರ್ಯಕರ್ತೆ ಪಲಿತ, ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳಾದ ಯೋಗೇಶ್, ಬಿ.ಕೆ. ಕುಮಾರಿ, ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನವೀನ್‍ಕುಮಾರ್, ರಮ್ಯ, ಸ್ತ್ರೀಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.