ಗೋಣಿಕೊಪ್ಪ ವರದಿ, ಅ. 18: ಅಕಾಡೆಮಿಗಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರಿಗೆ ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಯಿತು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಸದಸ್ಯರಾದ ಡಾ. ಮೇಚೀರ ಶುಭಾಶ್ ನಾಣಯ್ಯ, ಪಡಿಞರಂಡ ಪ್ರಭುಕುಮಾರ್, ಗೌರಮ್ಮ ಮಾದಮಯ್ಯ, ಜಾನಕಿ ಮಾಚಯ್ಯ, ಬಬ್ಬೀರ ಸರಸ್ವತಿ, ಶಂಭಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ, ಸದಸ್ಯರುಗಳಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಅಗೋಳಿಕಜೆ ಧನಂಜಯ, ಚೊಕ್ಕಾಡಿ ಪ್ರೇಮಾ ರಾಘವಯ್ಯ ಅವರುಗಳು ಅಧಿಕಾರ ಸ್ವೀಕಾರ ಮಾಡಿದರು. ಈ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ಪಾಲ್ಗೊಂಡಿದ್ದರು.