ಗೋಣಿಕೊಪ್ಪಲು, ಅ. 18: ನಗರದ ಖಾಸಗಿ ಫೈನಾನ್ಸ್‍ನಲ್ಲಿ ಉದ್ಯೋಗಿಯಾಗಿದ್ದ ಮೂಲತ ಕೇರಳದ ವಯನಾಡ್ ಜಿಲ್ಲೆಯ ಪ್ರದೋಶ್ ಕುಮಾರ್ (44) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೋಣಿಕೊಪ್ಪ ಬೈಪಾಸ್ ರಸ್ತೆಯ ಸುಂದರಂ ಫೈನಾನ್ಸ್‍ನಲ್ಲಿ ಕಳೆದ ಏಪ್ರಿಲ್ ತಿಂಗಳಿನಿಂದ ಉದ್ಯೋಗದಲ್ಲಿದ್ದ ಈತ ಶುಕ್ರವಾರ ಮಧ್ಯಾಹ್ನ ವೇಳೆ ಕಚೇರಿಯ ಸಮೀಪದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣರಾಗಿದ್ದಾರೆ. ಅಕ್ಕ,ಪಕ್ಕದ ಮನೆಯವರಿಗೆ ಸುದ್ದಿ ತಿಳಿದ ನಂತರದಲ್ಲಿ ಕೇರಳದ ಬಂಧುಗಳಿಗೆ ಸುದ್ದಿ ಮುಟ್ಟಿಸಲಾಗಿ ಬಂಧುಗಳ ಆಗಮನದ ನಂತರದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುರೇಶ್ ಬೋಪಣ್ಣ ನೂತನ ವೃತ್ತ ನೀರಿಕ್ಷಕ ರೆಡ್ಡಿ, ಡಿವೈಎಸ್ಪಿ ಜಯಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋಣಿಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಇಡಲಾಗಿದೆ. ಈತ ಸಂಸ್ಥೆಯಲ್ಲಿ ಉತ್ತಮ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬದಾಗಿ ತಿಳಿದು ಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.