ಸೋಮವಾರಪೇಟೆ, ಅ. 18: ಇಂದು ಸಂಜೆ ಸುರಿದ ಭಾರೀ ಮಳೆಗೆ ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯ ಹೊಸತೋಟ ಬಳಿ, ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೆಲ ಸಮಯ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಹೊಸತೋಟ-ಕುಂಬೂರು ನಡುವೆ ಭಾರೀ ಮಳೆಗೆ ರಸ್ತೆಗೆ ಮರ ಉರುಳಿದ್ದರಿಂದ ಸುಮಾರು 1 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ನಂತರ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.