ಕುಶಾಲನಗರ, ಅ. 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ತಾ. 20 ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮ ನಂಜರಾಯಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 7.30 ಗಂಟೆಗೆ ನಂಜರಾಯಪಟ್ಟಣದ ಶ್ರೀ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಾಮೂಹಿಕ ಸತ್ಯನಾರಾಯಣ ಪೂಜೆ ಬಳಿಕ 10.30 ಗಂಟೆಗೆ ಸತ್ಯನಾರಾಯಣ ಸ್ವಾಮಿಗೆ ಮಹಾಮಂಗಳಾರತಿ, 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.