ಮಡಿಕೇರಿ, ಅ. 18: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಇಬನ್ನಿವಳವಾಡಿ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯು ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ನಡೆಯಲಿದೆ.

ತಾ. 21 ಮತ್ತು 22 ರಂದು ರಂದು ವಿಭಾಗ ಮಟ್ಟದಲ್ಲಿ ಹಾಗೂ ತಾ. 24 ರಿಂದ 27 ರವರೆಗೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆ. ತಾ. 21 ರಂದು ಮಧ್ಯಾಹ್ನ 3.30 ಗಂಟೆಗೆ ವಿಭಾಗದ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ನಡೆಯಲಿದೆ. ತಾ. 25 ರಂದು ಬೆಳಿಗ್ಗೆ 10.30 ಗಂಟೆಗೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್ ಭೋಜೇಗೌಡ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎ. ಅಯ್ಯಪ್ಪ, ಡೀನ್ ಅರಣ್ಯ ಮಹಾವಿದ್ಯಾಲಯದ ನಿವೃತ್ತರಾದ ಎನ್.ಎ. ಪ್ರಕಾಶ್ ಜನತಾ ಬಜಾರ್ ಅಧ್ಯಕ್ಷ ರವಿ ಬಸಪ್ಪ, ಸಂಸದ ಪ್ರತಾಪ್ ಸಿಂಹ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.