ಕುಶಾಲನಗರ, ಅ. 18: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಚೈಲ್ಡ್‍ಲೈನ್ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಪದವಿ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ರಕ್ಷಾ ದಿನಾಚರಣೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು.

ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ನವೀನ್‍ಕುಮಾರ್ ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಕಾಲೇಜು ಉಪನ್ಯಾಸಕ ಪಿ.ಟಿ. ಕಾಶಿಕುಮಾರ್, ವಸಂತಕುಮಾರಿ, ಪಾವನಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.