ಕುಶಾಲನಗರ, ಅ. 19: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅಕ್ರಮ ಕಟ್ಟಡಗಳು ತಲೆಯೆತ್ತುತ್ತಿವೆ ಎಂದು ಅಲ್ಲಿನ ನಾಗರಿಕರಾದ ಬಿ.ಎಸ್. ದಿನೇಶ್ ಹಾಗೂ ಇತರರು ಆರೋಪಿಸಿದ್ದಾರೆ. ಈ ಬಗ್ಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ದಾಖಲೆ ಸಹಿತ ದೂರು ಸಲ್ಲಿಸಿದ್ದು, ಕಾನೂನು ಬಾಹಿರ ಕಾಮಗಾರಿ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಲಿಖಿತ ಹೇಳಿಕೆಯಲ್ಲಿ ಟೀಕಿಸಿದ್ದಾರೆ.