ನಾಪೋಕ್ಲು, ಅ. 19: ಸಮೀಪದ ನೆಲಜಿ ಫಾರ್ಮರ್ಸ್ ಡೆವೆಲಪ್‍ಮೆಂಟ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯನ್ನು (ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ) ನವೆಂಬರ್ 1 ರಂದು ಕ್ಲಬ್ ಆವರಣದಲ್ಲಿ ಏರ್ಪಡಿಸಲಾಗಿದೆ. ಮಹಿಳೆಯರಿಗೆ ಮತ್ತು ಪುರುಷರಿಗೆ ನಡೆಯುವ ಪ್ರತ್ಯೇಕ ಸ್ಪರ್ಧೆಗಳಲ್ಲಿ ಆಕರ್ಷಕ ಬಹುಮಾನಗಳಿವೆ ಎಂದು ಕ್ಲಬ್ ಪ್ರಕಟಣೆ ತಿಳಿಸಿದೆ.