ವೀರಾಜಪೇಟೆ, ಅ. 19: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೃಷ್ಣಪ್ಪ ಸ್ಥಾಪಿತ ಕೊಡಗು ಜಿಲ್ಲಾ ಶಾಖೆಯ ಸಂಘಟನೆ ವತಿಯಿಂದ ನವೆಂಬರ್ 10 ರಂದು ಬೆಳಿಗ್ಗೆ 11.30 ಗಂಟೆಗೆ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ 2018-19ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ವೀರಾಜಪೇಟೆ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ಓದಿನಿಂದ ವಿಶ್ವರತ್ನವೆಂದು ಹೆಸರು ಪಡೆದು ವಿಶ್ವದಲ್ಲಿಯೇ ಹೆಸರನ್ನು ಗಳಿಸಿದ್ದರು. ಅದೇ ರೀತಿ ನಮ್ಮ ಮಕ್ಕಳು ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ಜೊತೆಗೆ ಉನ್ನತಾಧಿಕಾರಿಗಳಾಗಬೇಕೆಂಬ ಗುರಿಯನ್ನಿಟ್ಟುಕೊಂಡು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಸಂಘಟನೆಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಮಾತನಾಡಿ, ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು, ಶೇ. 60 ರಷ್ಟು ಅಂಕಗಳಿಸಿದವರು ತಾ. 30 ರೊಳಗಾಗಿ ಎಲ್ಲಾ ದಾಖಲಾತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 9481523648 ಸಂಪರ್ಕಿಸಬಹುದು ಎಂದರು.