ಒಡೆಯನಪುರ, ಅ. 19: ಅಖಿಲ ಭಾರತ ಶರಣ ಸಾಹಿತ್ಯ ಪರಷತ್ ಕೊಡಗು ಜಿಲ್ಲಾ ಘಟಕ ಮತ್ತು ಬೆಸೂರು ಗ್ರಾ.ಪಂ. ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಶ್ರೀ ಬಾಲ ತ್ರಿಪುರ ಸುಂದರಿ ದೇವಾಲಯ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನ. 3 ರಂದು ಶರಣ ಸಂಗಮ ಜಿಲ್ಲಾಮಟ್ಟದ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವಸ್ವಾಮಿ ವಿದ್ಯಾಸಂಸ್ಥೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹೇಶ್, ನ. 3 ರಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ನಿಲುವಾಗಿಲು ಬಾಲ ತ್ರಿಪುರ ಸುಂದರಿ ದೇವಾಲಯ ಸಮಿತಿ ಜಂಟಿ ಆಶ್ರಯದಲ್ಲಿ ಶರಣ ಸಂಗಮ ಜಿಲ್ಲಾಮಟ್ಟದ ವಿಚಾರಗೋಷ್ಠಿಯನ್ನು ದೇವಾಲಯ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಬೆಳಿಗ್ಗೆ 10.30ಕ್ಕೆ ಶರಣ ಸಂಗಮ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ, ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಶಿವಲಿಂಗಸ್ವಾಮಿ ಸಾನಿಧ್ಯದಲ್ಲಿ ನಡೆಯಲಿರುವ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಉದ್ಘಾಟಿಸಲಿದ್ದು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯಾಧ್ಯಕ್ಷ ಅಪ್ಪರಾವ್ ಅಕ್ವೋಣಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್. ಮಹೇಶ್ ಕಾರ್ಯಕ್ರಮದ ಉದ್ದೇಶ ಕುರಿತಾಗಿ ಆಶಯ ನುಡಿಯಾಡಲಿಡುವರು ಮುಖ್ಯ ಅತಿಥಿಯಾಗಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯ ಸಿ.ಪಿ. ಪುಟ್ಟರಾಜು ಮುಂತಾದವರು ಭಾಗವಹಿಸುತ್ತಾರೆ ಎಂದರು.

ಶರಣ ಸಂಗಮ ವಿಚಾರಗೋಷ್ಠಿಯಲ್ಲಿ 3 ಹಂತದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ವಿಚಾರ ಮಂಡಿಸುತ್ತಾರೆ, ನಾಟಕ, ಬೆಸೂರು ಶಾಲಾ ಮಕ್ಕಳಿಂದ ಶರಣ ಸಾಹಿತ್ಯಕ್ಕೆ ಕುರಿತಾದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯುತ್ತದೆ ಎಂದು ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ ತಿಳಿಸಿದರು. 1 ದಿನದ ಶರಣ ಸಂಗಮ ವಿಚಾರಗೋಷ್ಠಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವೀರಾಜಪೇಟೆ ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಕೊಡ್ಲಿಪೇಟೆ ಕಲ್ಲುಮಠದ ಮಹಾಂತಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿರುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಮತ್ತು ದೇವಾಲಯ ಸಮಿತಿ ಗೌರವಾಧ್ಯಕ್ಷ ಎಂ.ಪಿ. ಅಪ್ಪಚ್ಚು ರಂಜನ್ ಪಾಲ್ಗೊಳ್ಳಲಿದ್ದು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಾಹಿತಿ ಮೋಹನ್ ಪಾಳೇಗಾರ್ ಮತ್ತಿತರರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಡಿ.ಬಿ. ಸೋಮಪ್ಪ, ಮಹಾದೇವಪ್ಪ, ಹೆಚ್.ಎಸ್. ಪ್ರೇಮ್‍ನಾಥ್, ರೇಣುಕಪ್ಪ, ದೇವಾಲಯ ಸಮಿತಿ ಪ್ರಮುಖರು ಹಾಜರಿದ್ದರು.