ಸೋಮವಾರಪೇಟೆ, ಅ. 19: ತಾಲೂಕಿನ ಅರಶಿನಕುಪ್ಪೆ-ಸಿದ್ಧಲಿಂಗಪುರದ ಶ್ರೀ ಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಮಾಸಿಕ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.

ದೇವಾಲಯದ ಪ್ರಧಾನ ಗುರುಗಳಾದ ಶ್ರೀ ರಾಜೇಶ್‍ನಾಥ್ ಗುರೂಜಿ ಅವರ ಮಾರ್ಗದರ್ಶನದಲ್ಲಿ, ಅರ್ಚಕರುಗಳಾದ ಜಗದೀಶ್ ಉಡುಪ, ವಾದಿರಾಜ್ ಸೇರಿದಂತೆ ಇತರರು, ಗಣಪತಿ ಹೋಮ, ತಂಬಿಲ ಸೇವೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.