ಮಡಿಕೇರಿ, ಅ.20: ಮಡಿಕೇರಿ, ಗೋಣಿಕೊಪ್ಪಲು, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರೊಂದಿಗೆ ಸಂವಹನ ಸಭೆಯು ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಆಯಾಯ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿದ್ಯುತ್ ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.