ಸೋಮವಾರಪೇಟೆ, ಅ.19: ಅಧಿಕಾರಿಗಳು ಗೈರಾದ ಹಿನ್ನೆಲೆ ಇಂದು ನಡೆಯಬೇಕಿದ್ದ ಬೇಳೂರು ಗ್ರಾಮ ಪಂಚಾಯಿತಿ ಕೆಡಿಪಿ ಸಭೆಯನ್ನು ಮುಂದೂಡಲಾಯಿತು.

ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಭಾಗ್ಯ ಮಂಜುನಾಥ್ ಅಧ್ಯಕ್ಷತೆಯಲ್ಲಿ ಇದೇ ಪ್ರಥಮ ಬಾರಿಗೆ ಆಯೋಜಿಸಿದ್ದ ಕೆಡಿಪಿ ಸಭೆಗೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದರಿಂದ ಗ್ರಾ.ಪಂ. ಉಪಾಧ್ಯಕ್ಷ ಸಂತೋಷ್ ಸೇರಿದಂತೆ ಇತರರು ಅಸಮಾಧಾನ ವ್ಯಕ್ತಪಡಿಸಿ, ಸಭೆಯನ್ನು ಮುಂದೂಡುವಂತೆ ಒತ್ತಾಯಿಸಿದರು. ಸಭೆಯಲ್ಲಿ ತೋಟಗಾರಿಕಾ ಇಲಾಖಾಧಿಕಾರಿಯನ್ನು ಹೊರತುಪಡಿಸಿ ಬೇರಾರೂ ಭಾಗವಹಿಸದ ಹಿನ್ನೆಲೆ ಇಂದಿನ ಸಭೆಯನ್ನು ತಾ. 24ಕ್ಕೆ ಮುಂದೂಡಲಾಯಿತು.