ಮಡಿಕೇರಿ, ಅ.19 : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಎಚ್.ಡಿ ಸಂಶೋಧನೆಗೆ ಡಿ.ಎಸ್.ಟಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿ.ಎಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ನವೆಂಬರ್ 16 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬಹುದು.