ಮಡಿಕೇರಿ, ಅ. 20: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಖಾಲಿಯಿರುವ 300 ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ಒಟ್ಟು ಹುದ್ದೆಗಳಲ್ಲಿ ಸೇವಾನಿರತ ಇಲಾಖಾ ಸಿಬ್ಬಂದಿಗಳಿಗೆ 32, ಪುರುಷ ಅಭ್ಯರ್ಥಿಗಳಿಗೆ 205 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 63 ಹುದ್ದೆಗಳು ಮೀಸಲಿರಿಸಿದೆ. ಇವರು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವದೇ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 2019ರ ನವೆಂಬರ್ 6 ಕ್ಕೆ ಅನ್ವಯವಾಗುವಂತೆ ಕನಿಷ್ಟ 21 ರಿಂದ 28 ವರ್ಷಗಳು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಶುಲ್ಕ ಪಾವತಿಸಲು ನವೆಂಬರ್ 8 ಕೊನೆಯ ದಿನ. ಹೆಚ್‍ಡಿಎಫ್‍ಸಿ ಬ್ಯಾಂಕಿನ ಅಧಿಕೃತ ಶಾಖೆ ಅಥವಾ ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿಸಬಹುದು. ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 250 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.