ಮಡಿಕೇರಿ, ಅ.20 : ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಪಿ.ಎಚ್.ಡಿ ಹಾಗೂ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30, ಸಂಜೆ 5 ಗಂಟೆಯವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಮತ್ತು 8050770004 ರಲ್ಲಿ ಸಂಪರ್ಕಿಸಬಹುದು.