ಕೂಡಿಗೆ, ಅ. 20: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೂಡಿಗೆಯಲ್ಲಿ ಶ್ರೀ ಶಕ್ತಿ ವೃದ್ಧಾಶ್ರಮ ಆವರಣದಲ್ಲಿ ಗೀತಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡಿಗೆ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ನೆರವೇರಿಸಿದರು. ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್, ಶ್ರೀ ಶಕ್ತಿ ಕೇಂದ್ರದ ಉಸ್ತುವಾರಿ ಚಂದ್ರು ಹಾಜರಿದ್ದರು. ಕೊಪ್ಪಳ ಜಿಲ್ಲೆಯ ಬಾಸುಸಾಬು ತಂಡದವರಿಂದ ಸುಗಮ ಸಂಗೀತ, ಮತ್ತು ಗೀತಗಾಯನ ಕಾರ್ಯಕ್ರಮ ನಡೆದವು.