ಕೂಡಿಗೆ, ಅ. 19: ಇಲ್ಲಿಗೆ ಸಮೀಪದ ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಉಪನ್ಯಾಸ ನೀಡಿದರು.

ನದಿಗಳ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡಿ, ಪ್ರತಿಯೊಬ್ಬ ನಾಗರಿಕನು ನದಿಗಳ ಮಾಲೀಕರು ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ ಮಾತನಾಡಿ, ನದಿಗಳನ್ನು ಸಂರಕ್ಷಣೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನಾವು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಹಂಡ್ರಗಿ ನಾಗರಾಜ್ ವಹಿಸಿದ್ದರು. ವೇದಿಕೆಯಲ್ಲಿ ಶಿಬಿರಾಧಿಕಾರಿ ಸಿ.ಎಸ್. ಹೇಮಲತಾ, ಸಹ ಶಿಬಿರಾಧಿಕಾರಿ ಕೆ.ಎ. ವೀಣಾ, ವೆಂಕಟೇಶ್, ಗಣೇಶ್ ಉಪಸ್ಥಿತರಿದ್ದರು ಕಾವೇರಿ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.