ಗೋಣಿಕೊಪ್ಪಲು, ಅ. 20: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ ವತಿಯಿಂದ ವಿಶೇಷಚೇತನ ಮಕ್ಕಳಿಗೆ ಹಾಗೂ ಪೋಷಕರಿಗೆ ವಸತಿಯುತ ಚೈತನ್ಯ ಶಿಬಿರ ನಡೆಯಿತು.
ಪೊನ್ನಂಪೇಟೆಯ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಸಂಪತ್ ಕುಮಾರ್ ಆರ್. ಉದ್ಘಾಟಿಸಿದರು.
ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಯೋಜನಾ ನಿರ್ದೇಶಕ ಜಯಕುಮಾರ್ ಕೆ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಷಣ್ಮುಗಂ ಹೆಚ್.ಎ. ಸರಗೂರು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಆರ್ಯುವೇದ ತಜ್ಞರಾದ ಅರುಂದತಿ, ವಾರ್ಡನ್ ಟಿ.ಎ. ಐತಪ್ಪ, ಮುಂತಾದವರು ಭಾಗವಹಿಸಿದ್ದರು. ಶಿಬಿರದಲ್ಲಿ ವೀರಾಜಪೇಟೆ ತಾಲೂಕಿನ 20 ವಿಶೇಷಚೇತನ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.