ಕೂಡಿಗೆ, ಅ. 20 : ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮ ಮಟ್ಟದ ಕರ್ನಾಟಕ ಅಭಿವೃದ್ಧಿ ಸಭೆಯು ತಾ. 23 ರಂದು ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷೆ ಭವ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಸವಿಲೇವಾರಿ ಘಟಕ
ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಸ್ಥಳದ ಸಮಸ್ಯೆ ಎದುರಾಗಿ ಜಿಲ್ಲಾ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ
5/1ಪಿ2ನಲ್ಲಿ ಎರಡು ಎಕರೆ ಪ್ರದೇಶವನ್ನು ಕಂದಾಯ ಇಲಾಖೆಯವರು ಗುರುತಿಸಿಕೊಟ್ಟಿರುವ ಹಿನ್ನೆಲೆಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿಯು ಪ್ರಗತಿಯತ್ತ ಸಾಗುತ್ತಿದೆ.
ಪೂರ್ವಭಾವಿ ಸಭೆ
ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಸ್ವಚ್ಛಮೇಳ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮುಳ್ಳುಸೋಗೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸ್ವಚ್ಛಮೇಳ ಕಾರ್ಯಕ್ರಮದ ವಿವಿಧ ಸಮಿತಿಗಳ ರಚನೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಉಪಾಧ್ಯಕ್ಷ ತಾರಾನಾಥ್, ಸದಸ್ಯರಾದ ಜಗದೀಶ್, ಹರೀಶ್, ಶಿವಾನಂದ, ರುದ್ರಾಂಬೆ, ದ್ರಾಕ್ಷಾಯಿಣಿ, ಕುಮಾರಸ್ವಾಮಿ, ವೇದಾವತಿ, ಅರುಣ್‍ಚಂದ್ರ, ವಿಶ್ವನಾಥ್, ಜಯಲಕ್ಷ್ಮಿ, ಸಂತೋಷ್, ಪಾರ್ವತಿ, ಸುಚಿತ್ರ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸೇರಿದಂತೆ ಮೊದಲಾದವರು ಇದ್ದರು.