ಮಡಿಕೇರಿ, ಅ. 19: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1 ರಂದು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಿಷ್ಟಾಚಾರದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದರು.

ಈ ಬಾರಿಯ ಕನ್ನಡ ರಾಜ್ಯೋತ್ಸವದಲ್ಲಿ ಆಹಾರ, ಕುಡಿಯುವ ನೀರು ವಿತರಿಸಲು ಸಂಪೂರ್ಣವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಲೋಕೋಪಯೋಗಿ ಇಇ ಇಬ್ರಾಹಿಂ, ಪಂಚಾಯತ್ ರಾಜ್ ಇಇ ಪ್ರಭು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ರೇವಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಉದ್ಯೋಗಾಧಿಕಾರಿ ಸಿ. ಜಗನ್ನಾಥ್, ಆಹಾರ ಇಲಾಖೆಯ ಉಪ ನಿರ್ದೇಶಕ ಗೌರವ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಇತರರು ಇದ್ದರು.