ಚೆಟ್ಟಳ್ಳಿ, ಅ. 21: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಕಾಡು ಗ್ರಾಮದ ಕಾವೇರಿ ನದಿ ದಡದಲ್ಲಿ ಗ್ರಾಮ ಪಂಚಾಯಿತಿಯಿಂದ ತ್ಯಾಜ್ಯ ಸುರಿದ ಹಿನ್ನೆಲೆಯಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಸುರಿದ ತ್ಯಾಜ್ಯವನ್ನು ತೆರವುಗೊಳಿಸಬೇಕೆಂದು ಪಟ್ಟು ಹಿಡಿದು ದಿಢೀರ್ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು ಕೂಡಲೇ ತ್ಯಾಜ್ಯ ತೆರವುಗೊಳಿಸದಿದ್ದಲ್ಲಿ ಪಂಚಾಯಿತಿ ಮುಂದೆ ಸುರಿದು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು
ಈ ಸಂದರ್ಭ ಪಂಚಾಯಿತಿಯ ಅಧಿಕಾರಿ ಅನಿಲ್ ಕುಮಾರ್ ಪ್ರತಿಭಟನಾಕಾರರನ್ನು ಸಮಾಧಾನಿಸಿ ತ್ಯಾಜ್ಯವನ್ನು ತೆರವುಗೊಳಿಸುವದಾಗಿ ಹೇಳಿದರು. ಈ ಸಂದರ್ಭ ಸ್ಥಳೀಯ ನಿವಾಸಿ ರಮೇಶ್, ಮುತ್ತಪ್ಪ ಯುವ ಕಲಾ ಸಂಘದ ಪದ್ಮನಾಭ, ಗ್ರಾಮದ ಏ.ಕೆ. ಅಬ್ದುಲ್ಲಾ, ತಾಲೂಕು ಪಂಚಾಯಿತಿ ಸದಸ್ಯೆ ಸುಹಾದಾ ಅಶ್ರಫ್, ನೆಲ್ಲಿಹುದಿಕೇರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಒ.ಎಂ. ಅಬ್ದುಲ್ಲಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಫಿಯಾ ಮೊಹಮ್ಮದ್, ಸದಸ್ಯರಾದ ಶುಕೂರ್, ಅಫ್ಸಲ್, ಅನ್ನಮ್ಮ, ಸ್ಥಳೀಯರಾದ ಯಪೀರ್, ಕೊಯಾ, ರಮೇಶ್, ಪುಟ್ಟಪ್ಪ, ಸುಧೀಶ್, ಅಕ್ಬರ್, ನಿಜಾಮ್, ರನೀಫ್, ಅಣ್ಣು, ವಿಜು, ವಿನೋದ್, ಸುರೇಶ್, ಸೇರಿದಂತೆ ಮತ್ತಿತರರು ಇದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಜೆಸಿಬಿಯನ್ನು ತರಿಸಿ ತಕ್ಷಣ ತ್ಯಾಜ್ಯವನ್ನು ತೆರವುಗೊಳಿಸಿದರು.