ಮಡಿಕೇರಿ, ಅ.21: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎಪಿಸಿಎಂಎಸ್., ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ ಹಾಗೂ ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಚುನಾವಣೆ ಹಾಗೂ ಸಹಕಾರ ಸಂಘಗಳಲ್ಲಿ ದುರುಪಯೋಗದ ಕುರಿತು ಶಿಕ್ಷಣ ಕಾರ್ಯಕ್ರಮವು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಮಾತನಾಡಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನಿಂದ ಪ್ರತಿ ವರ್ಷ ಸಹಕಾರ ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತಿದ್ದು, ಚುನಾವಣೆ, ಲೆಕ್ಕ ಪರಿಶೋಧನೆ ಕುರಿತು ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‍ನ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಬಾಂಡ್ ಗಣಪತಿ ಮಾತನಾಡಿ ಚುನಾವಣೆ ಹಾಗೂ ಸಹಕಾರ ಸಂಘಗಳ ಬೆಳವಣಿಗೆ ಕುರಿತ ಶಿಕ್ಷಣ ಕಾರ್ಯಕ್ರಮವನ್ನು ಸದುಪಯೋU Àಪಡಿಸಿಕೊಳ್ಳಲು ಸಲಹೆ ನೀಡಿದರು.

ರೂ. 25 ಸಾವಿರವÀನ್ನು ಪ್ರತಿ ಸಂಘಗಳಿಗೆ ಸಪ್ತಾಹ ಮಾಡಲು ನೇರವಾಗಿ ನೀಡಲಾಗುವದು ಎಂದು ಬಾಂಡ್ ಗಣಪತಿ ಹೇಳಿದರು. ಮಂಗಳೂರು ವೃತ್ತದ ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ಚುನಾವಣೆ ಹಾಗೂ ಸಹಕಾರ ಸಂಘಗಳಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ದುರುಪಯೋಗ ಹಾಗೂ ನಿಯಂತ್ರಣದ ಕುರಿತು ಉಪನ್ಯಾಸ ನೀಡಿದರು.

ಉಪಾಧ್ಯಕ್ಷ ಪಿ.ಸಿ.ಅಚ್ಚಯ್ಯ, ಎಸ್.ಪಿ. ನಿಂಗಪ್ಪ, ಎಚ್.ಎನ್. ರಾಮಚಂದ್ರ, ಎನ್.ಎ. ರವಿಬಸಪ್ಪ, ಕನ್ನಂಡ ಸಂಪತ್ ಮತ್ತಿತರರು ಪಾಲ್ಗೊಂಡಿದ್ದರು. ಮಂಜುಳ ಪ್ರಾರ್ಥಿಸಿದರು. ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.