ಮಡಿಕೇರಿ, ಅ. 21: ಅರಣ್ಯ ಇಲಾಖೆ ವತಿಯಿಂದ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ತಾ. 22 ರಂದು (ಇಂದು) ಸಸಿಗಳನ್ನು ನೆಡುವ ಮೂಲಕ ಹಸಿರು ಕರ್ನಾಟಕ ಆಂದೋಲನಕ್ಕೆ ಚಾಲನೆ ನೀಡಲಾಗುವದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಜಾಥಾಕ್ಕೆ ಚಾಲನೆ ದೊರೆಯಲಿದ್ದು, ಬೆಳಿಗ್ಗೆ 10.30 ಗಂಟೆಗೆ ಎಪಿಎಂಸಿ ಆವರಣದಲ್ಲಿ ಗಿಡಗಳನ್ನು ನೆಡಲಾಗುವದು. ಎಪಿಎಂಸಿ ಅಧ್ಯಕ್ಷ ಅಂಬಿ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಗಿಡನೆಡುವ ಮೂಲಕ ಉದ್ಘಾಟಿಸಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ಎಪಿಎಂಸಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.