ಸೋಮವಾರಪೇಟೆ, ಅ. 21: ದಿನಂಪ್ರತಿ ಪ್ರಯಾಣಿಕರನ್ನು ಕರೆದೊಯ್ಯುವ ಆಟೋ ಚಾಲಕರು ಇಂದು ಬಾಡಿಗೆಯ ಜಂಜಾಟವನ್ನು ಬದಿಗಿಟ್ಟು ಮೈದಾನದಲ್ಲಿ ಸಂಭ್ರಮಿಸಿದರು. ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಆಟೋ ಚಾಲಕರು-ಮಾಲೀಕರಿಗಾಗಿ ಸ್ಥಳೀಯ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾ ಸ್ಫರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು. ಸಂಘದ ವತಿಯಿಂದ ಸದಸ್ಯರುಗಳಿಗೆ ಕ್ರಿಕೆಟ್, ಹಗ್ಗಜಗ್ಗಾಟ, ಕಬಡ್ಡಿ, ಬಾಂಬ್ ಇನ್ ದ ಸಿಟಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ನಗರಾಧ್ಯಕ್ಷ ಮಂಜುನಾಥ್ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮೋಹನ್ ವಹಿಸಿದ್ದರು. ರಾಜ್ಯೋತ್ಸವ ಸಮಿತಿ ಗೌರವಾಧ್ಯಕ್ಷ ಪಾಣತ್ತಲೆ ಶಶಿಧರ್, ಸಂಘದ ಕಾರ್ಯದರ್ಶಿ ಗಂಗಾಧರ್ ಉಪಾಧ್ಯಕ್ಷ ಫಾರೂಕ್, ಗ್ರಾ.ಪಂ. ಸದಸ್ಯ ಸಿ. ಸಿ. ನಂದ, ಮೊಗೇರ ಸಮಾಜದ ಅಧ್ಯಕ್ಷ ದಾಮೋದರ್, ಹಿರಿಯ ಸದಸ್ಯ ಕೃಷ್ಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.