ಮಡಿಕೇರಿ, ಅ. 22: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುವ ಸೂರ್ತಲೆ ಸೋಮಣ್ಣ ಅವರು ಸದಸ್ಯ ಸ್ಥಾನವನ್ನು ತಿರಸ್ಕರಿಸಿದ್ದಾರೆ. ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಪರ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಕಳುಹಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಸದಸ್ಯತ್ವ ಆದೇಶವನ್ನು ತಿರಸ್ಕರಿಸಿರುವದಾಗಿ ಪತ್ರದಲ್ಲಿ ತಿಳಿಸಿದ್ದಾರೆ.