ಮಡಿಕೇರಿ, ಅ. 22: ಜಿಲ್ಲಾ ಪಂಚಾಯಿತಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಜಿಲ್ಲಾ ಆಸ್ಪತ್ರೆ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು ಗ್ರಾಮ ಪಂಚಾಯಿತಿ, ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರೀಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸಂಪಾಜೆ ಅಂಧತ್ವ ನಿವಾರಣಾ ಸಮಿತಿ, ಲಯನ್ಸ್ ಕ್ಲಬ್ ಮತ್ತು ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ಸಂಯುಕ್ತ ಆಶ್ರಯದಲ್ಲಿ ದಿ. ಬಾಲಚಂದ್ರ ಕಳಗಿ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷ ದೃಷ್ಟಿ ದಿನಾಚರಣೆಯ ಅಂಗವಾಗಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ತಾ. 23 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.