ಮಡಿಕೇರಿ, ಅ. 22: ಕೇಂದ್ರ ಜಾಗೃತ ಆಯೋಗದ ನಿರ್ದೇಶನದಂತೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳು ಹಾಗೂ ಉದ್ಯಮಗಳು ತಾ. 28 ರಿಂದ ನವೆಂಬರ್ 2 ರವರೆಗೆ ವಿಚಕ್ಷಣ ಅರಿವು ಸಪ್ತಾಹ ಆಚರಿಸಲಿದ್ದು, ಈ ಪ್ರಯುಕ್ತ ಕಾರ್ಪೊರೇಶನ್ ಬ್ಯಾಂಕ್, ಲೀಡ್ ಬ್ಯಾಂಕ್ ವತಿಯಿಂದ ತಾ. 23 ರಂದು (ಇಂದು) ಮಧ್ಯಾಹ್ನ 3 ಗಂಟೆಗೆ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಪ್ರಾಮಾಣಿಕತನ-ಬದುಕಿನ ಹಾದಿ ಎಂಬ ವಿಷಯದ ಕುರಿತು ವಿಚಾರಗೋಷ್ಠಿ ಆಯೋಜಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದನ್, ಇತರರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಲಿರುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.