ಮಡಿಕೇರಿ, ಅ. 22 : ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಮಟ್ಟದ ಆಟೋಟ ಕ್ರೀಡಾಕೂಟವು ತಾ. 25 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಟೋಟ (ಅಥ್ಲೆಟಿಕ್ಸ್) ಕ್ರೀಡಾಕೂಟ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ 100 ಮೀ. ಓಟ, 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ 200 ಮೀ. ಓಟ, 16 ವರ್ಷಕ್ಕಿಂತ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ 400 ಮೀ. ಓಟ ಸ್ಪರ್ಧೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.