ಮಡಿಕೇರಿ, ಅ. 22 : ಮಾಲಿನ್ಯದ ಪ್ರಮಾಣ ಪರಿಗಣಿಸಿ ಪಟಾಕಿ ಮತ್ತು ಸಿಡಿಮದ್ದುಗಳನ್ನು ಸುಡುವ ಬಗ್ಗೆ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯವು ಪರಿಸರ ಸಂರಕ್ಷಣಾ ಕಾಯ್ದೆ 1986 ತಿದ್ದುಪಡಿ 1999 ಮತ್ತು 2000 ರಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾತ್ರಿ 8 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿರುತ್ತದೆ. ಉಳಿದ ಅವಧಿಯಲ್ಲಿ ಪಟಾಕಿ ಸಿಡಿಸುವದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಆದೇಶಿಸಿದೆ ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.