ಶನಿವಾರಸಂತೆ, ಅ. 22: ಸಮೀಪದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಾಜ್ಯ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಜನಜಾಗೃತಿ ವೇದಿಕೆ, ಗುರುಸಿದ್ದ ಸ್ವಾಮಿ ವಿದ್ಯಾಪೀಠ, ಪ್ರಗತಿಬಂಧು ಸ್ವಸಹಾಯ ಸಂಘಗಳು, ನವಜೀವನ ಸಮಿತಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ನಡೆಯುತ್ತಿರುವ ಮದ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭ ತಾ. 23 ರಂದು (ಇಂದು) ಬೆಳಿಗ್ಗೆ 11.30ಕ್ಕೆ ನಡೆಯಲಿದೆ. ಸಮಾರಂಭವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸ ಲಿದ್ದಾರೆ. ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ, ಕಲ್ಲುಮಠದ ಮಠಾಧೀಶ ಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಮುಖ್ಯ ಅತಿಥಿ ಗಳಾಗಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ಸಂಸ್ಥಾಪಕ ಅಧ್ಯಕ್ಷ ಅಭಿಮನ್ಯುಕುಮಾರ್, ಬೆಸೂರು ಪ್ರೌಢಶಾಲಾ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲ, ಯಸ ಳೂರು ನಿವೃತ್ತ ಶಿಕ್ಷಕ ಮಹೇಶ್ವರಪ್ಪ, ಬ್ಯಾಡಗೊಟ್ಟ ಕಾಫಿ ಬೆಳೆಗಾರ ಲತೀಫ್ ಪಾಲ್ಗೊಳ್ಳುತ್ತಾರೆ ಎಂದು ಮದ್ಯ ವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.