ಗೋಣಿಕೊಪ್ಪ ವರದಿ, ಅ. 23: ಅಗ್ರಿಕಲ್ಚರಲ್ ಸೈನ್ಸಸ್ ಫೋರಂ ಆಫ್ ಕೊಡಗು ಮತ್ತು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಖಾದಿ ಮತ್ತು ಗ್ರಾಮೋದ್ಯೋಗ ಸಂಸ್ಥೆಯ ಆಶ್ರಯದಲ್ಲಿ ತಾ. 24 ರಂದು (ಇಂದು) ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಒಂದು ದಿನದ ಜೇನು ಕೃಷಿಕರ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆ. 10.30 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಆಸಕ್ತ ರೈತರು, ವಿದ್ಯಾರ್ಥಿಗಳು ಪಾಲ್ಗೊಳ್ಳ ಬಹುದಾಗಿದೆ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮುಖ್ಯಸ್ಥ ಡಾ. ಸಿ.ಜಿ. ಕುಶಾಲಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.