ಮಡಿಕೇರಿ, ಅ. 23: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಕೋಟೆಯಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಕಚೇರಿ ಸ್ಥಳಾಂತರಕ್ಕೆ ಸೂಚಿಸಿದರು.

ನ್ಯಾಯಾಲಯದ ನಿರ್ದೇಶನದಂತೆ ತಾ. 31 ರೊಳಗೆ ಕೋಟೆಯಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಬೇಕಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಕೋಟೆಯಲ್ಲಿರುವ ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಮಡಿಕೇರಿ ಕಸಬಾ ಹೋಬಳಿ ನಾಡ ಕಚೇರಿಯನ್ನು ಸ್ಥಳಾಂತರಿಸಬೇಕಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಾಡ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರಿಗೆ ಆಗಬೇಕಿರುವ ಕೆಲಸ ಕಾರ್ಯ ಬಗ್ಗೆ ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮಹೇಶ್, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇತರರು ಇದ್ದರು.