ಮಡಿಕೇರಿ, ಅ. 23: ಜಿಲ್ಲೆಯಲ್ಲಿ ಪ್ರತಿ ನಗರ ಮತ್ತು ಹಳ್ಳಿಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು, ಮಾಲೀಕರು ಅಂಗಡಿಯ ನಾಮಫಲಕದಲ್ಲಿ ಸರ್ಕಾರದ ಆದೇಶದಂತೆ ಶೇ. 60 ರಷ್ಟು ಕನ್ನಡ ಭಾಷೆ ಇರುವಂತೆ ನಾಮಪಲಕ ಅಳವಡಿಸಲು ಸರ್ಕಾರದ ಆದೇಶವಿದ್ದರೂ ಕೂಡ ಯಾವದೇ ಅಂಗಡಿ ಮುಂಗಟ್ಟುಗಳ ವರ್ತಕರು ಈ ನಿಯಮವನ್ನು ಪಾಲಿಸುತ್ತಿಲ್ಲ.

ಹಾಗಾಗಿ ಕೊಡಗಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳು ವರ್ತಕರು ಈ ನಿಯಮವನ್ನು ಪಾಲಿಸದಿದ್ದರೆ ಪರವಾನಗಿಯನ್ನು ರದ್ದುಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕಾಗಿ ಶಿವಾರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಕರವೇ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಫ್ರಾನಿಸ್ಸ್ ಡಿಸೋಜ ಮತ್ತು ಕರವೇ ತಾಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್, ಅರುಣ್ ಮತ್ತು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.