ಮಡಿಕೇರಿ, ಅ. 23: ವಸತಿ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 25 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಕರ್ಣಂಗೇರಿಯಲ್ಲಿ ನಿರ್ಮಿಸಿರುವ ಮನೆಗಳ ಪರಿವೀಕ್ಷಣೆ ಮಾಡಲಿದ್ದಾರೆ. ನಂತರ ಜಿಲ್ಲಾ ಪಂಚಾಯಿತಿ ನೂತನ ಭವನ ಉದ್ಘಾಟಿಸಲಿದ್ದಾರೆ. ಹಾಗೆಯೇ 2018-19ನೇ ಸಾಲಿನಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಿಸಿದ 35 ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ಕೈಗೊಂಡ ಪರಿಹಾರ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.