ಮಡಿಕೇರಿ, ಅ. 23: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾ. 25 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.