ಮಡಿಕೇರಿ, ಅ. 23: ಕೊಡಗು ಜಿಲ್ಲಾ ಪಂಚಾಯಿತಿಯ ನೂತನ ಆಡಳಿತ ಭವನವನ್ನು ತಾ. 25 ರಂದು (ನಾಳೆ) ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಉದ್ಘಾಟನೆಯೊಂದಿಗೆ ಲೋಕಾರ್ಪಣೆಗೊಳಿಸಲಿದ್ದಾರೆ.

ನಾಳೆ ಹಗಲು 11 ಗಂಟೆಗೆ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೇರಿದಂತೆ; ಕೊಡಗಿನ ಶಾಸಕರು, ಮೇಲ್ಮನೆ ಸದಸ್ಯರು, ಜಿ.ಪಂ. ಪ್ರತಿನಿಧಿಗಳು, ಸಂಸದರು ಸಹಿತ ಇತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ವೇಳೆ ನೂತನ ಆಡಳಿತ ಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿರುವ ಸಚಿವದ್ವಯರು, ಕರ್ಣಂಗೇರಿಯ 35 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ‘ಶಕ್ತಿ’ಗೆ ತಿಳಿಸಿದ್ದಾರೆ.