ಮಡಿಕೇರಿ, ಅ. 23: ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಇಬ್ನಿವಳವಾಡಿ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 24 ರಿಂದ 27 ರವರೆಗೆ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ ನಗರದ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ನಡೆಯಲಿದೆ. ತಾ. 25 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.