ಗೋಣಿಕೊಪ್ಪ ವರದಿ, ಅ. 23 : ಬಾಳೆಲೆ ಸಮೀಪದ ದೇವನೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ಅಲ್ಲಿನ ಅಳಮೇಂಗಡ ರವೀನಾ ಎಂಬವರ ಕಾಫಿ ತೋಟದಲ್ಲಿ ಬುಧವಾರ ಹೆಜ್ಜೆ ಗುರುತು ಪತ್ತೆಯಾಗಿದ್ದು, ರಾತ್ರಿ ಹೊತ್ತು ಹುಲಿ ತೋಟದಲ್ಲಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆಗೆ ಕ್ರಮಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.