ವೀರಾಜಪೇಟೆ, ಅ. 24: ಕಡಂಗ ಮರೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅದೇ ಗ್ರಾಮದ ಯುವಕ ವಿಜು (24) ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಮೇರೆ ನ್ಯಾಯಾಧೀಶರು ಆತನನ್ನು 15 ದಿನಗಳ ತನಕ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಿದ್ದಾರೆ. ವೀರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಜು ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.