ಕುಶಾಲನಗರ, ಅ. 24: ಕುಶಾಲನಗರದ ರೋಟರಿ ಇನ್ನರ್ ವೀಲ್ ಕ್ಲಬ್ ಹಾಗೂ ಬೆಂಗಳೂರಿನ ಬಸವೇಶ್ವರ ರೋಟರಿ ಕ್ಲಬ್‍ನ ಸಹಯೋಗದೊಂದಿಗೆ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಶಿಬಿರದಲ್ಲಿ ಪಾಲ್ಗೊಂಡ ಕುಶಾಲನಗರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಮಹಿಳೆಯರು ತಪಾಸಣೆಗೆ ಒಳಗಾದರು. 50ಕ್ಕೂ ಅಧಿಕ ಮಹಿಳೆಯರು ಶಿಬಿರದ ಪ್ರಯೋಜನ ಪಡೆದುಕೊಂಡರು. ಪೂರ್ಣಸುಧಾ ಕ್ಯಾನ್ಸರ್ ಫೌಂಡೇಶನ್‍ನ ಡಾ. ಕಾಂತ ತಪಾಸಣೆ ನಡೆಸಿದರು. ಕುಶಾಲನಗರ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಕವಿತಾ ಸಾತಪ್ಪನ್, ಪಟ್ಟಣ ಪಂಚಾಯಿತಿ ಸದಸ್ಯ ರೂಪ ಉಮಾಶಂಕರ್ ಮತ್ತಿತರರು ಇದ್ದರು.